ಮುಂದುವರಿದ ಮಳೆಯ ಅಬ್ಬರ ➤ ಆಂಧ್ರಪ್ರದೇಶ,ತೆಲಂಗಾಣದಲ್ಲಿ ಜನಜೀವನ ಅಸ್ಥವ್ಯಸ್ಥ

(ನ್ಯೂಸ್ ಕಡಬ) newskadaba.com ಹೈದರಾಬಾದ್ . 14: ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯ ತತ್ತರಿಸಿ ಹೋಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಎರಡು ರಾಜ್ಯಗಳಲ್ಲಿನ ತಗ್ಗು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಹಲವಾರು ವಸ್ತುಗಳನ್ನು ಕೊಚ್ಚಿಕೊಂಡು ಹೋಗಿರುವುದಾಗಿ ವರದಿ ತಿಳಿಸಿದೆ.

ತೆಲಂಗಾಣದಲ್ಲಿ ಮಳೆಗೆ ಸಂಬಂಧಿಸಿದಂತೆ ಸಂಭವಿಸಿದ ಘಟನೆಯಲ್ಲಿ ಈವರೆಗೆ 18 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿರುವುದಾಗಿ ವರದಿ ವಿವರಿಸಿದೆ. ಆಂಧ್ರಪ್ರದೇಶದಲ್ಲಿ ನಾಲ್ವರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Also Read  ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ರೂ. 266 ಹೆಚ್ಚಳ ➤ ಇಂದಿನಿಂದಲೇ ಹೊಸ ದರ ಜಾರಿಗೆ

error: Content is protected !!
Scroll to Top