ಸುಬ್ರಹ್ಮಣ್ಯ: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.18: ಸುಬ್ರಹ್ಮಣ್ಯ ಉತ್ತರಾದಿ ಮಠದ ಬಳಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಸುಬ್ರಹ್ಮಣ್ಯದಲ್ಲಿ ನಡೆದಿದೆ. ಮೃತ ಯುವಕನನ್ನು ಬೆಂಗಳೂರಿನ ರಂಗನಾಥ್ (35ವ.)‌ ಎಂದು ಗುರುತಿಸಲಾಗಿದೆ.

 

 

ಈತ ವಾರದ ಹಿಂದೆ ಮನೆ ಬಿಟ್ಟು ಬಂದಿರುವುದಾಗಿ ತಿಳಿದು ಬಂದಿದೆ. ಮೃತ ದೇಹವನ್ನು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯಲಾಗಿದೆ. ಈತನ ಆತ್ಮಹತ್ಯೆಗೆ ಕಾರಣ ಏನು ಎಂಬುದಾಗಿ ತಿಳಿದು ಬಂದಿಲ್ಲ. ಸುಬ್ರಹ್ಮಣ್ಯ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಸಿದ್ದಾರೆ.

Also Read  08.10.2020 News Highlights

 

error: Content is protected !!
Scroll to Top