ಪತ್ನಿಯ ರುಂಡ ಕತ್ತರಿಸಿ ಆಕೆಯ ಪ್ರಿಯಕರನ ಮನೆ ಮುಂದೆ ಇಟ್ಟ ಪತಿರಾಯ

(ನ್ಯೂಸ್ ಕಡಬ) newskadaba.com ತೆಲಂಗಾಣ . 19: ಪತ್ನಿಗೆ ಅನೈತಿಕ ಸಂಬಂಧ ಇದೆ ಎಂಬ ಸಂಶಯದ ಮೇಲೆ ಬೇಸತ್ತ ಪತಿಯೊಬ್ಬ ಆಕೆಯ ರುಂಡವನ್ನು ಕತ್ತರಿಸಿ ಅದನ್ನು ಪ್ರಿಯಕರನ ಮನೆ ಮುಂದೆ ತಂದಿಟ್ಟು ಹೋಗಿರುವ ಭೀಕರ ಘಟನೆ ತೆಲಂಗಾಣದಲ್ಲಿ ನಡೆದಿದೆ.

 

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಅನಂತಸಾಗರ್ ಗ್ರಾಮದ ಜುರ್ರು ಸಾಹಿಲು ತನ್ನ ಪತ್ನಿ 35 ವರ್ಷದ ಅಂಶಮ್ಮ ಎಂಬಾಕೆಯ ರುಂಡವನ್ನು ಕತ್ತರಿಸಿದ್ದಾರೆ. ನಂತರ ಆ ರುಂಡವನ್ನು ಬೈಕ್ ನಲ್ಲಿ ಐದು ಕಿ.ಮೀ ದೂರದಲ್ಲಿರುವ ನಾರಾಯಣ್ ಖೇಡ್ ಗ್ರಾಮಕ್ಕೆ ತೆಗೆದುಕೊಂಡು ಹೋಗಿ ಅಂಶಮ್ಮ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯ ಮನೆಯ ಬಾಗಿಲ ಮುಂದೆ ಇಟ್ಟು ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Scroll to Top