ಮೈಸೂರು: ಜಂಬೂ ಸವಾರಿಯಲ್ಲಿ 2 ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಮಾತ್ರ ಅವಕಾಶ

(ನ್ಯೂಸ್ ಕಡಬ) newskadaba.com ಮೈಸೂರು, ಅ.23: ರಾಜ್ಯ ಸರ್ಕಾರವು ಈ ಬಾರಿ ಸರಳವಾಗಿ ದಸರಾ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಜಂಬೂ ಸವಾರಿಯಲ್ಲಿ 2 ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯಲಿದೆ.

 

 

ಈ ಬಾರಿಯ ಜಂಬೂ ಸವಾರಿಯಲ್ಲಿ 2 ಸ್ತಬ್ಧ ಚಿತ್ರಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಮೈಸೂರು ಸಂಸ್ಕೃತಿ ಪ್ರತೀಕ ಆನೆ ಬಂಡಿ ಸ್ತಬ್ಧ ಚಿತ್ರ ಮತ್ತು ಕೊರೊನಾ ವಾರಿಯರ್ಸ್ ಗೆ ಅಭಿನಂದನೆ ಸಲ್ಲಿಸುವ ಸ್ತಬ್ಧ ಚಿತ್ರಗಳ ಮೆರವಣಿಗೆ ಅವಕಾಶ ನೀಡಲಾಗಿದೆ. ಪ್ರತಿ ವರ್ಷ 30 ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯುತ್ತಿತ್ತು. ಆದರೆ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ಕೇವಲ 2 ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಅವಕಾಶ ನೀಡಲಾಗಿದೆ.

Also Read  ಪ್ರೀತಿ ಗೆಹ್ಲೋತ್‌ ಸೇರಿ 3 ಐಎಎಸ್ ಅಧಿಕಾರಿಗಳ ವರ್ಗಾವಣೆ

error: Content is protected !!
Scroll to Top