ಭಾರೀ ಮಳೆಗೆ ಮನೆ ಗೋಡೆ ಕುಸಿದು ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಅ.23: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದಲ್ಲಿ ಮಳೆಗೆ ಮನೆ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ರವಿಕುಮಾರ್(45) ಮತ್ತು ಅವರ ಪುತ್ರ ರಾಹುಲ್(15) ಎಂದು ಗುರುತಿಸಲಾಗಿದೆ.

 

 

ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಸಿಯಾಗಿದ್ದ ಗೋಡೆ ಕುಸಿದು ಬಿದ್ದಿದ್ದು, ಮನೆಯಲ್ಲಿ ಮಲಗಿದ್ದವರ ಮೇಲೆ ಗೋಡೆ ಕುಸಿದು ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರವಿಕುಮಾರ್ ಪತ್ನಿ ಮತ್ತು ಪುತ್ರಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಶೇಷಗಳಡಿ ಸಿಲುಕಿದ್ದ ಇಬ್ಬರನ್ನು ರಕ್ಷಿಸಲಾಗಿದೆ. ಶಾಸಕ ಎಂ. ಕೃಷ್ಣಾರೆಡ್ಡಿ, ಪೊಲೀಸರು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಮೃತರ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.

Also Read  ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ - ಕರಾವಳಿಯಿಂದ ನೇರ ರೈಲು ಸಂಪರ್ಕ ಕಲ್ಪಿಸಲು ಮನವಿ

 

 

error: Content is protected !!
Scroll to Top