(ನ್ಯೂಸ್ ಕಡಬ) newskadaba.com ಕಡಬ, ಅ.23: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಇತ್ತೀಚೆಗೆ ನಡೆದ ದಲಿತ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಬರ್ಬರ ಹತ್ಯೆಯನ್ನು ಖಂಡಿಸಿ ಅ.23 ರಂದು ಕಾಂಗ್ರೇಸ್ ಸಮಿತಿ ಹಾಗೂ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಕಡಬ ತಾಲೂಕು ಕಛೇರಿಯೆದುರು ಪ್ರತಿಭಟನೆ ನಡೆಯಿತು.
ಕಡಬ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗಣೇಶ್ ಕೈಕುರೆಯವರು ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರದ ನೀತಿಯನ್ನು ಖಂಡಿಸಿದರು. ಕಡಬ ಜಿಲ್ಲಾ ಪಂಚಾಯತ್ ಸದಸ್ಯ ಪಿಪಿ ವರ್ಗೀಸ್, ಕೆಪಿಸಿಸಿ ಸದಸ್ಯ ಡಾ.ರಘು ಬೆಳ್ಳಿಪ್ಪಾಡಿ, ಜಿ.ಪಂ ಸದಸ್ಯ ಸರ್ವೋತ್ತಮ ಗೌಡ, ಬ್ಲಾಕ್ ಕಾಂಗ್ರೇಸ್ ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ಬಳ್ಳೇರಿ, ಜಿಲ್ಲಾ ಕಾಂಗ್ರೇಸ್ ಉಪಾಧ್ಯಕ್ಷ ವಿಜಯ್ ಕುಮಾರ್ ರೈ, ಕಾರ್ಯದರ್ಶಿಗಳಾದ ಎಚ್ ಕೆ ಇಲಿಯಾಸ್, ಸೈಮನ್ ಸಿಜೆ, ಡಿಡಿಸಿ ಸದಸ್ಯ ಸುಧೀರ್ ಕುಮಾರ್ ಶೆಟ್ಟಿ, ಎ.ಎಸ್ ಶೆರಿಫ್, ಕಡಬ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಬಾಬು ಮುಗೇರ, ಮರ್ದಾಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹರೀಶ್ ಶೆಟ್ಟಿ ನಡುಮಜಲು, ಕಡಬ ಬ್ಲಾಕ್ ಕಾಂಗ್ರೇಸ್ ಕಾರ್ಯದರ್ಶಿಗಳಾದ ಸೇಮಿಯರ್ ಬೇಬಿ ತೋಮಸ್ ಇಡೆಯಾಳ, ಸುಳ್ಯ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಸುಧೀರ್ ದೇವಾಡಿಗ, ಕಡಬ ಬ್ಲಾಕ್ ಕಾಂಗ್ರೇಸ್ ಕಿಸಾನ್ ಘಟಕದ ಅಧ್ಯಕ್ಷ ಭವಾನಿಶಂಕರ್ ಮೇಲಾಂಟ, ಎಪಿಯಂಸಿ ಮಾಜಿ ಸದಸ್ಯ ರಾಮಕೃಷ್ಣ ಹೊಳಾರು, ಕಡಬ ಬ್ಲಾಕ್ ಕಾಂಗೇಸ್ ಕಾರ್ಯದರ್ಶಿ ಡೆನಿಸ್ ಫೆರ್ನಾಂಡಿಸ್, ದಲಿತ ಮುಖಂಡರಾದ ವಸಂತ ಕುಬುಲಾಡಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ, ತಾಲೂಕು ಸಂಚಾಲಕ ಶೀನಾ ಬಾಳಿಲ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬಳಿಕ ಕಂದಾಯ ಅಧಿಕಾರಿಗಳ ಮುಳಾಂತರ ರಾಜ್ಯಪಾಲರಿಗೆ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಕಡಬ ಕಂದಾಯ ನಿರೀಕ್ಷಕ ಅವಿನ್ ರಂಗತ್ ಮಲೆ ಮನವಿ ಸ್ವೀಕರಿಸಿದರು. ಕಡಬ ಬ್ಲಾಕ್ ಕಾಂಗ್ರೇಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಬೊಟ್ಟಡ್ಕ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.