ಬಂಟ್ವಾಳದಲ್ಲಿ ರೌಡಿ ಶೀಟರ್ ಹತ್ಯೆ ಪ್ರಕರಣ ➤ ಗುಂಡ್ಯದಲ್ಲಿ ಗುಂಡು ಹಾರಿಸಿ ಆರೋಪಿಯ ಅರೇಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ . 24: ರೌಡಿ ಶೀಟರ್ ಉಮರ್ ಫಾರೂಕ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಇಂದು (ಶನಿವಾರ) ಬೆಳ್ಳಂಬೆಳಗ್ಗೆ ಗುಂಡ್ಯದಲ್ಲಿ ಪೊಲೀಸರು ಗುಂಡು ಹಾರಿಸಿ ಬಂಧಿಸಲಾಗಿದ್ದು, ಘಟನೆಯಿಂದ ಬಂಧಿತ ಆರೋಪಿ ಮತ್ತು ಎಸ್ಸೈ ಒಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮೂಲತಃ ಕಲ್ಲಡ್ಕ ನಿವಾಸಿ ಪ್ರಸಕ್ತ ನಂದಾವರದಲ್ಲಿ ವಾಸವಿರುವ ಖಲೀಲ್ ಬಂಧಿತ ಆರೋಪಿ. ಕಾರ್ಯಾಚರಣೆ ವೇಳೆ ಬಂಟ್ವಾಳ ಗ್ರಾಮಾಂತರ ಎಸ್ಸೈ ಪ್ರಸನ್ನ ಅವರು ಗಾಯಗೊಂಡಿದ್ದಾರೆ.

ಶುಕ್ರವಾರ ಸಂಜೆ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ರೌಡಿ ಶೀಟರ್ ಉಮರ್ ಫಾರೂಕ್ ಎಂಬಾತನನ್ನು ತಂಡ ವೊಂದು ಹತ್ಯೆ ಮಾಡಿತ್ತು ಹತ್ಯೆಯ ಬಳಿಕ ಪರಾರಿಯಾಗಿದ್ದ ಆರೋಪಿಗಳು ಇಂದು ಬೆಳಗ್ಗೆ ಕಾರಿನಲ್ಲಿ ಬೆಂಗಳೂರಿಗೆ ಪರಾರಿಯಾಗು ತ್ತಿರುವ ಮಾಹಿತಿ ಪಡೆದ ಪೊಲೀಸರು ಗುಂಡ್ಯದಲ್ಲಿ ಕಾರನ್ನು ಅಡ್ಡಗಟ್ಟಿದ್ದಾರೆ. ಈ ಸಂದರ್ಭ ಪ್ರಮುಖ ಆರೋಪಿ ಖಲೀಲ್ ನನ್ನು ಪೊಲೀಸರು ಬಂಧಿಸಿದ್ದು ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

 

Scroll to Top