ಕಾಸರಗೋಡು: ಹನಿಟ್ರ್ಯಾಪ್ ಕಳವು ➤ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.24: ಕಳವು ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಕಾಸರಗೋಡು ಡಿ ವೈ ಎಸ್ ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಅಹಮ್ಮದ್ ಕಬೀರ್ ಎಂದು ಗುರುತಿಸಲಾಗಿದೆ.

 

 

13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಈತ ಬೇಡಡ್ಕ ಠಾಣಾ ವ್ಯಾಪ್ತಿಯಲ್ಲಿ ನಡೆದ ಹನಿ ಟ್ರ್ಯಾಪ್ ಪ್ರಕರಣದ ಆರೋಪಿಯಾಗಿದ್ದುಲ್ಲದೇ , ಕೇರಳ, ಕರ್ನಾಟಕ, ತಮಿಳುನಾಡು, ರಾಜಸ್ಥಾನ ಮೊದಲಡೆಗಳಲ್ಲಿ ನಡೆದ ಕಳವು ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದಾನೆ. ನ್ಯಾಯಾಲಯ ಈತನನ್ನು ತಲೆಮರೆಸಿಕೊಂಡಿದ್ದ ಆರೋಪಿ ಎಂದು ಘೋಷಿಸಿತ್ತು. ಈತನ ವಿರುದ್ಧ ಕಾಸರಗೋಡು ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

Also Read  ದಿನಾಲೂ ಸ್ವಲ್ಪಮಟ್ಟಿಗೆ ಏರಿಕೆಯಾಗುತ್ತಿರುವ ಪೆಟ್ರೋಲಿಯಂ ಉತ್ಪನ್ನಗಳ ದರ ► ಪೆಟ್ರೋಲ್ ಲೀ.71.72 ಹಾಗೂ ಡೀಸೆಲ್‌ ಲೀ.6183

 

error: Content is protected !!
Scroll to Top