ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ



(ನ್ಯೂಸ್ ಕಡಬ) newskadaba.com ಬೆಳಗಾವಿ, ಅ. 26. ಗುಂಪು ಕಟ್ಟಿಕೊಂಡು ಯುವಕನ ಮೇಲೆ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ  ಗ್ಯಾಂಗ್ ವಾಡಿ ರಸ್ತೆಯಲ್ಲಿ ಕಳೆದ ದಿನ ರಾತ್ರಿ ನಡೆದಿದೆ. ಮೃತನನ್ನು ಅಜಂ ನಗರದ ನಿವಾಸಿ ಶಹಬಾಜ್ (24) ಎಂದು ಗುರುತಿಸಲಾಗಿದೆ.





 

 

ಮೃತ ವ್ಯಕ್ತಿ ರೌಡಿಶೀಟರ್ ಎಂಬುದಾಗಿ ತಿಳಿದುಬಂದಿದೆ. ಕೊಲೆಗೆ ನಿಖರ ಕಾರಣ ಏನು ಎಂದು ತಿಳಿದುಬಂದಿಲ್ಲ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 

error: Content is protected !!
Scroll to Top