(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 28. ವಿಧಾನಪರಿಷತ್ ನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.
ಚುನಾವಣೆಯಲ್ಲಿ 40 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ವಿಧಾನಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ನವೆಂಬರ್ 4 ರಂದು ಮತ ಎಣಿಕೆ ನಡೆಯಲಿದೆ. ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರದಲ್ಲಿ ಮತದಾನ ನಡೆಯಲಿದೆ. ವಿಧಾನಪರಿಷತ್ ನ 4 ಮತ ಕೇಂದ್ರಗಳಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ, ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಮತ್ತು ಇತರೆ ಬ್ಯಾಂಕ್ ಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಖಾನೆಗಳು, ಕೈಗಾರಿಕೆ ಸಂಸ್ಥೆಗಳು, ಸಹಕಾರಿ ರಂಗದ ಸಂಘ ಸಂಸ್ಥೆಗಳು ಸೇರಿದಂತೆ ಇತರೆ ಸಂಸ್ಥೆಯಲ್ಲಿ ಕಾಯಂ ಹಾಗೂ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಮತ್ತು ಶಿಕ್ಷಕರಿಗೆ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ.