ವೆನ್ಲಾಕ್ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಆಗ್ರಹಿಸಿ ಪ್ರತಿಭಟನೆ



(ನ್ಯೂಸ್ ಕಡಬ) newskadaba.com ಮಂಗಳೂರು, . 28. ಸರಕಾರಿ ಆಸ್ಪತ್ರೆ ಹೋರಾಟ ಸಮಿತಿ ಉಳ್ಳಾಲ ಇದರ ಬ್ಯಾನರ್‌ ಅಡಿಯಲ್ಲಿ ಇಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ  ತೊಕ್ಕೊಟ್ಟು ಬಸ್‌ ನಿಲ್ದಾಣದ ಬಳಿ ಸಾಮೂಹಿಕ ಧರಣಿ ನಡೆಸಲಾಯಿತು.







ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸುವುದು, ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸುವುದು, ವೆನ್ಲಾಕ್ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವುದು, ಪ್ರತಿ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಕ್ಯಾನ್ಸರ್ ಆಸ್ಪತ್ರೆಯನ್ನು ಸ್ಥಾಪಿಸುವುದು, ಜನಸಂಖ್ಯೆಗೆ ಅನುಸಾರ ಪ್ರಾಥಮಿಕ ,ಸಮುದಾಯ ,ತಾಲೂಕು ಆಸ್ಪತ್ರೆ ನಿರ್ಮಿಸಿ, ಖಾಲಿ ಇರುವ ವೈದ್ಯ, ಸಿಬ್ಬಂದಿ ಹುದ್ದೆ ಭರ್ತಿ ಮಾಡುವಂತೆ ಒತ್ತಾಯಿಸಿ ಧರಣಿ ನಡೆಯಿತು. ಡಿವೈಎಫ್‌ಐ‌ ರಾಜ್ಯ ಅಧ್ಯಕ್ಷ ಮುನೀರ್‌ ಕಾಟಿಪಳ್ಳ, ಕೃಷ್ಣಪ್ಪ ಸಾಲಿಯಾನ್‌, ಕಾಂಗ್ರೆಸ್‌ ಮುಖಂಡರಾದ ದಿನೇಶ್‌ ರೈ ಹಾಗೂ ದಿನೇಶ್‌ ಕುಂಪಲಾ ಪಾಲ್ಗೊಂಡಿದ್ದರು.






error: Content is protected !!
Scroll to Top