(ನ್ಯೂಸ್ ಕಡಬ) newskadaba.com ಜಮ್ಮು ಅ. 30: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನ ಗ್ರಾಮವೊಂದರಲ್ಲಿ ಮೂವರು ಬಿಜೆಪಿ ಕಾರ್ಯಕರ್ತರನ್ನು ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಇಂದು 8.20ರ ಸುಮಾರಿಗೆ ಕುಲ್ಗಾಮ್ ಪೊರಾ ಗ್ರಾಮದಲ್ಲಿ ನಡೆದ ಭಯೋತ್ಪಾದಕ ಕೃತ್ಯದ ಬಗ್ಗೆ ಮಾಹಿತಿ ಪಡೆದ ಕುಲ್ಗಾಮ್ ಪೊಲೀಸರು, ಮೂವರು ಬಿಜೆಪಿ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ ನಡೆಸಿರುವ ಮಾಹಿತಿಯನ್ನು ತಿಳಿಸಿದ್ದಾರೆ. ಹೀಗಾಗಿ ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.