ಶಿರ್ವ: ಕಲ್ಲು ಸಾಗಾಟದ ಟೆಂಪೋ ಪಲ್ಟಿ

(ನ್ಯೂಸ್ ಕಡಬ) newskadaba.com ಶಿರ್ವ  . 31: ಸೈಂಟ್ ಮೇರಿಸ್ ಶಾಲೆ ಸಮೀಪ ಕಲ್ಲು ಸಾಗಾಟದ ಟೆಂಪೋವೊಂದು ಪಲ್ಟಿಯಾಗಿ ಚಾಲಕ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

 

ಶಿರ್ವ ಕಡೆಯಿಂದ ಕಟಪಾಡಿ ಕಡೆಗೆ ಬರುತ್ತಿದ್ದ ಟೆಂಪೋ ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದ ಟೆಂಪೋ ಚಾಲಕ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ  ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

 

 

Scroll to Top