ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ



(ನ್ಯೂಸ್ ಕಡಬ) newskadaba.com ಕಡಬ, ನ. 01. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಂಗವಾಗಿ ಇಂದು ಕಡಬ ತಹಶೀಲ್ದಾರ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ನಡೆಯಿತು.








ಕಡಬ ತಹಶೀಲ್ದಾರ್ ಬಿ.ಅನಂತ ಶಂಕರ್ ಧ್ವಜಾರೋಹಣಗೈದು ಶುಭ ಹಾರೈಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ತಾ.ಪಂ ಅಧ್ಯಕ್ಷೆ ಕುಮಾರಿ ರಾಜೇಶ್ವರಿ ಕನ್ಯಾಮಂಗಳ ನೆರವೇರಿಸಿದರು. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜನಾರ್ಧನ ಗೌಡ ಪಣೆಮಜಲು, ಎಪಿಎಂಸಿ ಪುತ್ತೂರು ಅಧ್ಯಕ್ಷ ದಿನೇಶ್ ಮೆದು, ಜಿ.ಪಂ ಸದಸ್ಯೆ ಆಶಾ ತಿಮ್ಮಪ್ಪ ಗೌಡ, ಕಡಬ ಠಾಣಾ ಎಸ್.ಐ ರುಕ್ಮನಾಯ್ಕ್ ರೋಟರಿ ಕ್ಲಬ್ ಅಧ್ಯಕ್ಷ ಕುರಿಯನ್ ಮೊದಲಾದವರು ಉಪಸ್ಥಿತರಿದ್ದರು.






error: Content is protected !!
Scroll to Top