ಕುಕ್ಕೆ ಶ್ರೀ ಸುಬ್ರಹ್ಮಣ್ಯ : ಅಭಿವೃದ್ಧಿ ಸಮಿತಿಯಲ್ಲಿ ಮಲೆಕುಡಿಯ ಜನಾಂಗದವರ ನಿರ್ಲಕ್ಷ್ಯಕ್ಕೆ ಮಲೆಕುಡಿಯ ಸಂಘದಿಂದ ಆಕ್ಷೇಪ

(ನ್ಯೂಸ್ ಕಡಬ) newskadaba.com  ಕುಕ್ಕೆ ಶ್ರೀ ಸುಬ್ರಹ್ಮಣ್ಯ, ನ. 01: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಅಭಿವೃದ್ದಿ ಸಮಿತಿಯಲ್ಲಿ ಮಲೆಕುಡಿಯ ಜನಾಂಗದವರನ್ನು ಸೇರಿಸಿಕೊಳ್ಳದೆ ನಿರ್ಲಕ್ಷ್ಯ ಮಾಡಿರುವುದಾಗಿ ಆರೋಪಿಸಿ ಮಲೆಕುಡಿಯರ ಸಂಘ ವಲಯ ಸಮಿತಿ ಸುಬ್ರಹ್ಮಣ್ಯ ಪತ್ರಿಕಾ ಹೇಳಿಕೆ ಅ.31 ರಂದು ಬಿಡುಗಡೆ ಮಾಡಿದ್ದಾರೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದೇವಸ್ಥಾನಕ್ಕೆ ನೂತನವಾಗಿ ಅಭಿವೃದ್ಧಿ ಸಮಿತಿ ರಚನೆಯಾಗಿದ್ದು ಸ್ಥಳೀಯ ಮೂಲ ನಿವಾಸಿಗಳಾದ ಮಲೆ ಕುಡಿಯ ಬುಡಕಟ್ಟು ಸಮುದಾಯವನ್ನು ನಿರ್ಲಕ್ಷಿದ್ದಾರೆ. ಈ ಹಿಂದಿನ ನಿರ್ಧಾರದಂತೆ ಮನೆಕುಡಿಯ ಜನಾಂಗದವರ ಕೋರಿಕೆಯನ್ನು ನಿರ್ಲಕ್ಷ್ಯ ಮಾಡಲಾಗಿದೆ. ಈ ಹಿಂದಿನ ವ್ಯಸಸ್ಥಾಪನಾ ಸಮಿತಿಗಳಲ್ಲಿ ಮಲೆಕುಡಿಯರಿಗೆ ಅವಕಾಶ ಕಲ್ಪಿಸಲಾಗಿದೆ. ಈಗ ಆದೇಶವಾಗಿರುವ ಅಭಿವೃದ್ಧಿ ಸಮಿತಿಯನ್ನು ರದ್ದುಗೊಳಿಸಿ ಮಲೆಕುಡಿಯ ಜನಾಂಗದವರಿಗೆ ಅವಕಾಶ ಕಲ್ಪಿಸಬೇಕು.

Also Read  ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ನಾಗೇಶ್ ಶೆಟ್ಟಿ

ಇಲ್ಲವಾದಲ್ಲಿ ಮಲೆಕುಡಿಯ ಜನಾಂಗದವರ ಸಂಘಟನೆಯು ಹೋರಾಟದ ಮೂಲಕ ನ್ಯಾಯ ಪಡೆಯಲಾಗುವುದು ಎಂದು ರಾಜ್ಯ ಜಿಲ್ಲಾ ತಾಲೂಕು ಮಲೆಕುಡಿಯರ ಸಮಿತಿಯ ಪರವಾಗಿ ಮಲೆಕುಡಿಯರ ಸಂಘ ವಲಯ ಸಮಿತಿ ಸುಬ್ರಹ್ಮಣ್ಯ ತಿಳಿಸಿದೆ.

error: Content is protected !!
Scroll to Top