ಸೋಮೇಶ್ವರ ಕಡಲ ತೀರದಲ್ಲಿ ಸ್ವಚ್ಚತಾ ಅಭಿಯಾನ

(ನ್ಯೂಸ್ ಕಡಬ) newskadaba.com ಸೋಮೇಶ್ವರ . 02: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆ ಕಾರ್ಯಕರ್ತರಿಮದ ಸೋಮೇಶ್ವರ ಕಡಲ ತೀರದಲ್ಲಿ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಚೀಫ್ ವಾರ್ಡನ್ ಡಾ| ಮುರಲೀಮೋಹನ್ ಚೂಂತಾರು ಅವರ ನೇತೈತ್ವದಲ್ಲಿ ನಡೆಸಲಾಯಿತು.

 

 

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆ ಕಾರ್ಯಕರ್ತರಿಮದ ಸೋಮೇಶ್ವರ ಕಡಲ ತೀರದಲ್ಲಿ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಸ್ವಚ್ಚತಾ ಅಭಿಯಾನ ನಡೆಸಿದರು. ಬಳಿಕ ಮಾತನಾಡಿದ ಡಾ|ಮುರಲೀಮೋಹನ್ ಚೂಂತಾರು ಅವರು, “ಕಡಲತೀರದಲ್ಲಿ ಪರಿಸರ ಸ್ವಚ್ಚವಾಗಿಡಲು ಪ್ಲಾಸ್ಟಿಕ್ ತ್ಯಾಜ್ಯ, ಬಾಟಲುಗಳ ತ್ಯಾಜ್ಯಗಳು ಮೀನುಗಳ ಸಹಿತ ಅನೇಕ ಜೀವ ಸಂಕುಲದ ರಕ್ಷಣೆಗೆ ಮಾರಕವಾಗಿದ್ದು ಅವುಗಳನ್ನು ಸಮುದ್ರಕ್ಕೆ ಎಸೆಯೆದಂತೆ ತೀರದಲ್ಲಿ ಪ್ರವಾಸಿಗರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಸದ ತೊಟ್ಟಿಗಳನ್ನು ಅಲ್ಲಲ್ಲಿ ಇಡುವುದರ ಮುಖಾಂತರ ತ್ಯಾಜ್ಯಗಳು ಸಮುದ್ರದ ಸನೀರಿಗೆ ಬೀಳದಂತೆ ಗಜಾಗ್ರತೆಯನ್ನು ವಹಿಸಬೇಕು ಎಂದು ಕರೆನೀಡಿದರು. ಜತೆಗೆ ನಮ್ಮ ಆರೋಗ್ಯದ ದೃಷ್ಟಿಯಿಂದ ಪರಿಸರವನ್ನು ಸ್ವಚ್ಚವಾಗಿಡಬೇಕು” ಎಂದರು

Also Read  ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಹೊತ್ತಿ ಉರಿದ ಮನೆ ➤‌ ಅಪಾರ ನಷ್ಟ

 

error: Content is protected !!
Scroll to Top