ಕಡಬ ಪೇಟೆಯಲ್ಲಿ ಕೊರೋನಾ ಜಾಗೃತಿ ಜಾಥಾ

(ನ್ಯೂಸ್ ಕಡಬ) newskadaba.com ಕಡಬ:, . 03. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಕಡಬ ಇದರ ವತಿಯಿಂದ ಕಡಬ ಪೇಟೆಯಾದ್ಯಂತ ಕೊರೋನಾ ಜಾಗೃತಿ ಜಾಥಾ ಇಂದು ನಡೆಯಿತು.

ಕಡಬ ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ, ಕೊರೋನಾ ರೋಗವನ್ನು ಬೇರು ಸಮೇತ ಕಿತ್ತೆಗೆಯಲು ಪ್ರತಿಯೊಬ್ಬರು ಪ್ರಯತ್ನ ಪಟ್ಟರೆ ಮಾತ್ರ ಸಾಧ್ಯ ಈ ನಿಟ್ಟಿನಲ್ಲಿ ಕೊರೋನಾ ವೈರಸ್ ಬಗ್ಗೆ ಮಾಹಿತಿ ನೀಡಿ ಜಾಗೃತಿ ನೀಡಬೇಕಾಗಿದೆ, ಇದರನ್ವಯ ಆರೋಗ್ಯ ಇಲಾಖೆ ಹಾಗೂ ಸ್ಥಳೀಯಾಡಳಿತದ ಜತೆಗೆ ನಾವೆಲ್ಲರೂ ಕೈ ಜೋಡಿಸಬೇಕಾಗಿದೆ ಎಂದರು. ಈ ಸಂದರ್ಭದಲ್ಲಿ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಚಿತ್ರಾ ರಾವ್, ಕಡಬ ತಾಲೂಕು ಉಪತಹಶೀಲ್ದಾರ್ ಗಳಾದ ಕೆ.ಟಿ.ಮನೋಹರ್, ನವ್ಯ, ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅರುಣ್.ಕೆ, ಸಿಬ್ಬಂದಿ ವಾರಿಜಾ ಹಾಗೂ ಕಡಬ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಜಾಥಾದಲ್ಲಿ ಪಾಲ್ಗೋಂಡಿದ್ದರು.

Also Read  ಕೃಷಿ ಇಲಾಖೆ ವತಿಯಿಂದ ಬೆಳೆ ಸ್ಪರ್ಧೆ- ಅರ್ಹ ರೈತರಿಂದ ಅರ್ಜಿ ಆಹ್ವಾನ

error: Content is protected !!
Scroll to Top