ಉಡುಪಿ ಡಿಸಿ ನೇತೃತ್ವದಲ್ಲಿ ದಾಳಿ ➤ ಅಕ್ರಮವಾಗಿ ದಾಸ್ತಾನು ಮಾಡಿದ್ದ ಅನ್ನಭಾಗ್ಯ ಅಕ್ಕಿ ವಶಕ್ಕೆ

(ನ್ಯೂಸ್ ಕಡಬ) newskadaba.com ಉಡುಪಿ . 04: ಬ್ರಹ್ಮಾವರ ತಾಲೂಕು ಶಿರಿಯಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಮರ್ಗಿ ಎಂಬಲ್ಲಿನ ರೈಸ್ ಮಿಲ್ ಮೇಲೆ , ಸೋಮವಾರ ಮಧ್ಯಾಹ್ನ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದ ಅಧಿಕಾರಿ ಇವರುಗಳ ತಂಡ ಅನ್ನಬಾಗ್ಯ ಯೋಜನೆಯ ಸುಮಾರು 600 ಕ್ವಿಂಟಾಲ್ ಗೂ ಅಧಿಕ ತೂಕದ ಅಕ್ಕಿಯನ್ನು ವಶಪಡಿಸಿಕೊಂಡಿದೆ.

ಜಿಲ್ಲೆಯಲ್ಲಿ ಅನ್ನಬಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮತ್ತು ದಾಸ್ತಾನು ಮಾಡುತ್ತಿರುವ ಸುಮಾರು ಒಂದು ತಿಂಗಳಿದ ಸತತವಾಗಿ ಮಾಹಿತಿಯನ್ನು ಸಂಗ್ರಹಿಸಿ, ಈ ದಾಳಿಯನ್ನು ನಡೆಸಲಾಗಿದ್ದು, ಅಂದಾಜು 16.5 ಲಕ್ಷ ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ 3 ಲಾರಿ ಚಾಲಕರು ಮತ್ತು ಕ್ಲೀನರ್ ಸೇರಿದಂತೆ, 6 ಲಾರಿ, ಎರಡು 407, ಒಂದು ಟಾಟಾ 909 ಹಾಗೂ ಮಾರುತಿ ಇಕೋ ವಾಹನಗಳನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

Also Read  ಕೋಡಿಂಬಾಳ: ನಾದಿನಿಗೆ ಆಸಿಡ್‌ ಎರಚಿದ ಪ್ರಕರಣ ➤ ಆರೋಪಿಗೆ ಜಾಮೀನು ಮಂಜೂರು

 

 

ಸಾರ್ವಜನಿಕರು ಪಡಿತರ ಅಕ್ಕಿಯ ಅಕ್ರಮ ದಾಸ್ತಾನು, ಸಾಗಾಟ ಕುರಿತು ಮಾಹಿತಿ ಇದ್ದಲ್ಲಿ ಜಿಲ್ಲಾಡಳಿತಕ್ಕೆ ತಿಳಿಸಬೇಕು ಎಂದು ಉಡುಪಿ ಡಿಸಿ ಜಗದೀಶ್ ತಿಳಿಸಿದ್ದಾರೆ. ದಾಳಿಯಲ್ಲಿ ಆಹಾರ ಇಲಾಖೆಯ ಉಪ ನಿರ್ದೇಶಕ ಗಜೇಂದ್ರ, ಆಹಾರ ನಿರೀಕ್ಷಕರಾದ ಪಾರ್ವತಿ, ಸುರೇಶ್ ಮತ್ತಿತರರು ಭಾಗವಹಿಸಿದ್ದರು.

error: Content is protected !!
Scroll to Top