(ನ್ಯೂಸ್ ಕಡಬ) newskadaba.com ಸುಳ್ಯ, ನ. 05: ಮಡಪ್ಪಾಡಿ ಗ್ರಾಮದ ರಸ್ತೆ ಅಭಿವೃದ್ಧಿಗೆ ಹಲವು ವರ್ಷಗಳ ಕಾಲ ಬೇಡಿಕೆಯಾಗಿದ್ದು, ಇದೀಗ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ನವರು ಸ್ಪಂದಿಸಿದ್ದಾರೆ. ರಸ್ತೆ ಅಭಿವೃದ್ಧಿಗೆ ಎರಡು ಕೋಟಿ ರೂ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.
ಜನವರಿ ತಿಂಗಳಿನಲ್ಲಿ ಮಡಪ್ಪಾಡಿಯಲ್ಲಿ ನಡೆದ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮ ವಾಸ್ತವ್ಯದಲ್ಲಿ ರಸ್ತೆ ಸಮಸ್ಯೆ ಮತ್ತು ನೆಟ್ ವರ್ಕ್ ಸಮಸ್ಯೆ ಬಹುಬೇಡಿಕೆ ಇರುವುದರಿಂದ ಇಂದು ಮಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ಕಾರ್ಯಕಾರಣಿ ಸಭೆಗೆ ಆಗಮಿಸಿದ ಈಶ್ವರಪ್ಪ ರವರನ್ನು ದ.ಕ ಕಾರ್ಯನಿರತ ಪತ್ರಕರ್ತರ ಸಂಘ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಇದಕ್ಕೆ ತಕ್ಷಣ ಸ್ಪಂಧಿಸಿದ ಅವರು ಎರಡು ಕೋಟಿ ರೂ. ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ಸಂಘದ ಪದಾಧಿಕಾರಿಗಳು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನೂ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಇದನ್ನು ಪರಿಶೀಲಿಸಿರುವುದಾಗಿ ಅವರು ಭರವಸೆ ನೀಡಿದ್ದಾರೆ.