ಬೆಳ್ತಂಗಡಿ: ಪಟ್ಟಣ ಪಂಚಾಯತಿನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, . 07: ಬೆಳ್ತಂಗಡಿ ಪಟ್ಟಣ ಪಂಚಾಯತಿನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆಯು ಚುನಾವಣಾಧಿಕಾರಿ, ತಹಶೀಲ್ದಾರ್ ಮಹೇಶ್ ಜೆ. ಉಪಸ್ಥಿತಿಯಲ್ಲಿ ಇಂದು ನಡೆಯಿತು.

 

 

ಬೆಳ್ತಂಗಡಿ ನಗರ ಪಂಚಾಯತ್ ನೂತನ ಅಧ್ಯಕ್ಷರಾಗಿ ಬಿಜೆಪಿಯ ರಜನಿ ಕುಡ್ವ ಹಾಗೂ ಉಪಾಧ್ಯಕ್ಷರಾಗಿ ಜಯಾನಂದ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ, ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ತುಳಸಿ ಆಯ್ಕೆಯಾಗಿದ್ದಾರೆ. ಪಂಚಾಯತಿನ ಅಧ್ಯಕ್ಷ ಗಾದಿ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷ ಗಾದಿಯನ್ನು ಸಾಮಾನ್ಯ ಸ್ಥಾನಕ್ಕೆ ಮೀಸಲಿರಿಸಿ ಸರಕಾರ ಆದೇಶ ಹೊರಡಿಸಿದ್ದು, ಅಧ್ಯಕ್ಷತೆಗೆ ಬಿಜೆಪಿಯಿಂದ ರಜನಿ ಕುಡ್ವ ಹಾಗೂ ಉಪಾಧ್ಯಕ್ಷತೆಗೆ ಜಯಾನಂದ ಗೌಡ ನಾಮಪತ್ರ ಸಲ್ಲಿಸಿದ್ದರು. ಪಟ್ಟಣ ಪಂಚಾಯತ್ ನಲ್ಲಿ 7 ಬಿಜೆಪಿ ಹಾಗೂ 4 ಕಾಂಗ್ರೆಸ್ ಸದಸ್ಯರಿದ್ದು, ಬಿಜೆಪಿಗೆ ಬಹುಮತ ಇರುವುದರಿಂದ ಕಾಂಗ್ರೆಸ್ ಸದಸ್ಯರು ಅಧ್ಯಕ್ಷ ಹಾಗೂ ಉಪಾಧ್ಯಕ್ಷತೆಗೆ ಯಾವುದೇ ನಾಮಪತ್ರ ಸಲ್ಲಿಸಲಿಲ್ಲ.

Also Read  ರೇಣುಕಾಸ್ವಾಮಿ ಕೊಲೆ ಪ್ರಕರಣ ಸೆ.30ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

 

error: Content is protected !!
Scroll to Top