ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ,ಲ್ಯಾಪ್ ಟ್ಯಾಪ್ ವಿತರಣೆ ➤ ಜ್ಞಾನತಾಣದ ಅಂತರ್ಜಾಲ ಶಿಕ್ಷಣ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು . 11:ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ರಾಜ್ಯದ ಗ್ರಾಮೀಣ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಗ್ರಾಮೀಣ ಮಕ್ಕಳಿಗೆ ‘ಆನ್ ಲೈನ್ ಮತ್ತು ಆಫ್ ಲೈನ್ ಶಿಕ್ಷಣ’ ಪಡೆಯಲು ಅನುಕೂಲವಾಗಲು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಮೂಲಕ ‘ ಉಚಿತ ಟ್ಯಾಬ್ ಮತ್ತು ಲ್ಯಾಪ್ ಟ್ಯಾಪ್ ವಿತರಿಸುವ’ ಜ್ಞಾನತಾಣದ ಅಂತರ್ಜಾಲ ಶಿಕ್ಷಣ ಕಾರ್ಯಕ್ರಮಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

ಜ್ಞಾನತಾಣ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ 21 ಕೋಟಿ ರೂಪಾಯಿ ವೆಚ್ಚದಲ್ಲಿ ಮೊದಲ ವರ್ಷ 20 ಸಾವಿರ ಟ್ಯಾಬ್ ಮತ್ತು 10 ಸಾವಿರ ಲಾಪ್ ಟಾಪ್ ಗಳನ್ನು ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ಗ್ರಾಮೀಣ ಮಕ್ಕಳಿಗೆ ವಿತರಿಸಲು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಯೋಜನೆ ಹಾಕಿಕೊಂಡಿದೆ. “ಜ್ಞಾನತಾಣ”- ಅಂತರ್ಜಾಲ ಶಿಕ್ಷಣ ಕಾರ್ಯಕ್ರಮದ ಮೂಲಕ 5 ರಿಂದ 10 ನೇ ತರಗತಿಯ ಮಕ್ಕಳಿಗೆ ಇಂಗ್ಲಿಷ್, ಗಣಿತ, ವಿಜ್ಞಾನ ಇತ್ಯಾದಿ ವಿಷಯಗಳನ್ನು ಅಧ್ಯಯನ ನಡೆಸಬಹುದು. 450 ಗೌರವ ಶಿಕ್ಷಕರನ್ನು ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ನಿಯೋಜಿಸಲಾಗಿದೆ.

Also Read  ಮಂಗಳೂರು: ಹೋಟೆಲ್ ನಲ್ಲಿ ತಂಗಿದ್ದ ಅನ್ಯಕೋಮಿನ ಜೋಡಿ ➤ ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು

 

 

error: Content is protected !!
Scroll to Top