ಕ್ಯಾಂಪಸ್ ಫ್ರಂಟ್ ಕುಂದಾಪುರ ವತಿಯಿಂದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ➤ ಎನ್ ಇ ಪಿ 2020 ಕುರಿತು ಶಿಕ್ಷಕರೊಂದಿಗೆ ಸಂವಾದ

(ನ್ಯೂಸ್ ಕಡಬ) newskadaba.com ಕುಂದಾಪುರ . 12: ಭಾರತದ ಪ್ರಥಮ ಶಿಕ್ಷಣ ಮಂತ್ರಿ ಮೌಲಾನ ಅಬುಲ್ ಕಲಾಂ ಆಝಾದ್ ಸ್ಮರಣಾರ್ಥ ಆಚರಿಸುವ ಶಿಕ್ಷಣ ದಿನಾಚರಣೆಯ ಅಂಗವಾಗಿ ಕ್ಯಾಂಪಸ್ ಫ್ರಂಟ್ ಕುಂದಪುರ ಏರಿಯಾ ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿಯ ವಿಷಯದಲ್ಲಿ ಶಿಕ್ಷಕರೊಂದಿಗೆ ಸಂವಾದ ಕಾರ್ಯಕ್ರಮವು ಕುಂದಾಪುರ ಕ್ಯಾಂಪಸ್ ಫ್ರಂಟ್ ಅಧ್ಯಕ್ಷ ಝಿಶಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

 

 

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷರಾದ ಫಯಾಝ್ ದೊಡ್ಡಮನೆ ವಿಷಯ ಮಂಡನೆ ಮಾಡಿದರು. ವಿದ್ಯಾ ವರ್ಧಕ ಇಂಜಿನಿಯರಿಂಗ್ ಕಾಲೇಜು ಮೈಸೂರು ಇದರ ಉಪನ್ಯಾಸಕ ನಿಧಾಲ್ ಗಂಗೊಳ್ಳಿ ಮತ್ತು ಇಕ್ರಾ ಎಜುಕೇಷನ್ ಟ್ರಸ್ಟ್ ಪದಾಧಿಕಾರಿ ಲಿಯಾಖತ್ ಅವರು ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

 

 

ರಾಜ್ಯ ಸಮಿತಿ ಸದಸ್ಯ ರಿಯಾಜ್ ಕಡಂಬು ಸಮಾರೋಪ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಕ್ಯಾಂಪಸ್ ಡೇ ಮತ್ತು ಎಜುಕೇಶನ್ ಡೇ ಭಾಗವಾಗಿ ನಡೆದ ಸ್ಪರ್ಧೆಗಳ ಪ್ರಶಸ್ತಿಗಳನ್ನು ವಿಜೇತರಿಗೆ ನೀಡಲಾಯಿತು. ಕ್ಯಾಂಪಸ್ ಫ್ರಂಟ್ ಜಿಲ್ಲಾ ನಾಯಕ ಉಸಾಮ ಗಂಗೊಳ್ಳಿ ಉಪಸ್ಥಿತರಿದ್ದರು. ಕುಂದಾಪುರ ಕ್ಯಾಂಪಸ್ ಫ್ರಂಟ್ ಕಾರ್ಯದರ್ಶಿ ಯಾಸೀನ್ ಶಹಬಾಜ್ ಕಾರ್ಯಕ್ರಮವನ್ನು ನಿರೂಪಿಸಿದರು.

 

 

error: Content is protected !!

Join the Group

Join WhatsApp Group