ಸೋಮವಾರದಿಂದ ಅಯ್ಯಪ್ಪನ ದರ್ಶನಕ್ಕೆ ಅವಕಾಶ ➤ ಕೊರೊನಾ ನೆಗೆಟಿವ್ ಇದ್ರೆ ಮಾತ್ರ ಪ್ರವೇಶಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ತಿರುವನಂತಪುರಂ . 15: ಸೋಮವಾರದಿಂದ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದರೆ ಕಟ್ಟುನಿಟ್ಟಿನ ಕೊರನಾ ನಿಯಮಾವಳಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಶಬರಿಮಲೆ ಅಯ್ಯಪ್ಪ ದೇವಾಲಯದ ಪ್ರಧಾನ ಅರ್ಚಕ ಎ.ಕೆ.ಸುಧೀರ್ ನಂಬೂಥಿರಿಯವರು ಪ್ರಧಾನ ಅರ್ಚಕ ಕಂದರರು ರಾಜೀವರು ಅವರ ನೇತೃತ್ವದಲ್ಲಿ ಇಂದು ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲು ತೆರೆಯಲಿದ್ದಾರೆ.

ಸೋಮವಾರ ವೃಶ್ಚಿಕದ ಮೊದಲ ದಿನವಾದ್ದರಿಂದ ಹೊಸ ಪ್ರಧಾನ ಅರ್ಚಕರು ದೇವಸ್ಥಾನದ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಿದ್ದಾರೆ. ಸೋಮವಾರ ಬೆಳಗ್ಗೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದರೆ ಕೊರೊನಾ ಹಿನ್ನೆಲೆ ಕಟ್ಟುನಿಟ್ಟಿನ ನಿಯಮ ಪಾಲಿಸುವುದು ಕಡ್ಡಾಯವಾಗಿದ್ದು, ಒಂದು ದಿನಕ್ಕೆ ಕೇವಲ 1 ಸಾವಿರ ಭಕ್ತರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ.ಶುಕ್ರವಾರ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸಚಿವರು ಈ ನಿರ್ಧಾರ ಕೈಗೊಂಡಿದ್ದಾರೆ. ಯಾತ್ರಾರ್ಥಿಗಳು ಆ್ಯಂಟಿ ವೈರಸ್ ಮಾಸ್ಕ್, ಸಾಮಾಜಿಕ ಅಂತರ ಕಾಪಾಡುವುದು, 60-65 ವರ್ಷದೊಳಗಿರುವವರು ವೈದ್ಯಕೀಯ ವರದಿ ತರುವುದು ಕಡ್ಡಾಯವಾಗಿದೆ. ಅಲ್ಲದೆ 24 ಗಂಟೆಯೊಳಗಡೆ ಪರೀಕ್ಷೆ ಮಾಡಿಸಿದ ಕೊರೊನಾ ನೆಗೆಟಿವ್ ವರದಿಯನ್ನು ತರುವುದು ಕಡ್ಡಾಯವಾಗಿದೆ.

 

error: Content is protected !!

Join the Group

Join WhatsApp Group