ಪಿಯು ಉಪನ್ಯಾಸಕರಿಗೆ ಸಿಹಿಸುದ್ದಿ- ನ. 20 ರಿಂದ ನೇಮಕಾತಿಗೆ ಸೂಚನೆ ➤ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 17. ಪಿಯು ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ಈಗಾಗಲೇ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಂಡಿರುವ ನೂತನ ಪಿಯು ಉಪನ್ಯಾಸಕ ಅಭ್ಯರ್ಥಿಗಳಿಗೆ ನವೆಂಬರ್ 20 ರಿಂದ ನೇಮಕಾತಿ ಆದೇಶಗಳನ್ನ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

 

ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ನವೆಂಬರ್ 20ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಸಾಂಕೇತಿಕವಾಗಿ ನೇಮಕಾತಿ ಆದೇಶವನ್ನು ನೀಡಲಿದ್ದಾರೆ. ಇನ್ನು 23ರಿಂದ ಪಿಯು ಉಪನ್ಯಾಸಕರ ವರ್ಗಾವಣಾ ಪ್ರಕ್ರಿಯೆ ಆರಂಭವಾಗಲಿದ್ದು, ಅಂದಿನಿಂದಲೇ ಅರ್ಜಿ ಸಲ್ಲಿಕೆಗೆ ಅವಕಾಶವಿರಲಿದೆ ಎಂದರು.

Also Read  KPCC ಕಾರ್ಯದರ್ಶಿ ವಿಜಯ್ ಮುಳಗುಂದ ಮನೆಗೆ ಐಟಿ ದಾಳಿ ►ಡಿಕೆಶಿ ಆಪ್ತರ ಮೇಲೆ ಮುಂದುವರೆದ ಶೋಧ ಕಾರ್ಯ

 

 

error: Content is protected !!
Scroll to Top