(ನ್ಯೂಸ್ ಕಡಬ) newskadaba.com ಮಂಗಳೂರು ನ. 17: ಮಂಗಳೂರು ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳು ಇಂದು ಆರಂಭಗೊಂಡಿದೆ. ಕೊರೊನಾ ಲಾಕ್ ಡೌನ್ ನ 8 ತಿಂಗಳ ನಂತರ ಕಾಲೇಜು ಬಾಗಿಲು ತೆರೆದಿದ್ದು, ವಿದ್ಯಾರ್ಥಿಗಳು ಕೋವಿಡ್ ಪ್ರಮಾಣ ಪತ್ರ ಹಾಗೂ ಪೋಷಕರ ಮುಚ್ಚಳಿಕೆ ಪತ್ರದ ಜೊತೆಗೆ ಆಗಮಿಸಿದ್ದಾರೆ. ಇನ್ನೂ ಹಲವು ವಿದ್ಯಾರ್ಥಿಗಳಿಗೆ ಕೋವಿಡ್ ಪ್ರಮಾಣ ಪತ್ರ ಸಿಗದ ಹಿನ್ನೆಲೆಯಲ್ಲಿ ತರಗತಿಗೆ ಹಾಜರಾಗಲು ಸಾಧ್ಯವಾಗಿಲ್ಲ. ನೆಗೆಟಿವ್ ವರದಿ ಜೊತೆ ಹಾಜರಾದ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ತರಗತಿಗೆ ಹಾಜರಾಗಿದ್ದಾರೆ.
ಸರಕಾರದ ಮಾರ್ಗಸೂಚಿಯಂತೆ ಒಂದು ಬೆಂಚ್ ನಲ್ಲಿ ಇಬ್ಬರು ವಿದ್ಯಾರ್ಥಿಗಳು (ಶೇ.50) ಮಾತ್ರ ಆಸೀನರಾಗುವಂತೆ ವ್ಯವಸ್ಥೆ ಮಾಡಲಾಗಿತ್ತು . ಜೊತೆಗೆ ಕಾಲೇಜು ಕ್ಯಾಂಪಸ್ ಪ್ರವೇಶ ದ್ವಾರದಲ್ಲೇ ಹ್ಯಾಂಡ್ ಸ್ಯಾನಿಟೈಸರ್ ಇಡಲಾಗಿತ್ತು. ಅಲ್ಲದೆ ಉಪ್ಯಾಸಕರು, ಕಾಲೇಜು ಸಿಬ್ಬಂದಿ ಕಡ್ಡಾಯ ಮಾಸ್ಕ್, ಫೇಸ್ ಶೀಲ್ಡ್ ಧರಿಸಿ ಆಗಮಿಸಿದ್ದರು. ಆದರೆ ಹಾಜರಾತಿ ಕಡಿಮೆ ಇದ್ದುದ್ದರಿಂದ ಹೆಚ್ಚಿನ ಪಾಠ ಪ್ರವಚನ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಷ್ಟೊಂದು ನಡೆದಿಲ್ಲ.