ದ.ಕ. ಜಿಲ್ಲೆಯಲ್ಲಿ ಇಳಿಮುಖದತ್ತ ಕೋವಿಡ್ -19 ಕೇಸ್



(ನ್ಯೂಸ್ ಕಡಬ) newskadaba.com ಮಂಗಳೂರು . 18:  ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ ದಿನ  30 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ ನಿನ್ನೆ 91 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.







ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ ಉತ್ತಮವಾಗಿದ್ದು, 29962ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 681 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ದಿನ ಇಬ್ಬರು ಸೋಂಕಿಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಕೊರೋನಾ ಸಾವಿನ ಸಂಖ್ಯೆ 696ಕ್ಕೆ ಏರಿಕೆಯಾಗಿದೆ. ಇನ್ನು ದ.ಕ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 304173 ಮಂದಿ ಪರೀಕ್ಷೆಗೊಳಪಟ್ಟಿದ್ದಾರೆ.

 






 

 

error: Content is protected !!
Scroll to Top