ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಧಾನಕಾರ್ಯದರ್ಶಿಯಾಗಿ ► ಸುಧೀರ್ ದೇವಾಡಿಗ ಬಲ್ಯ ನೇಮಕ

(ನ್ಯೂಸ್ ಕಡಬ) newskadaba.com ಕಡಬ,ಅ.4. ಸುಳ್ಯ ವಿಧಾನಸಭಾ ಕ್ಷೇತ್ರದ ಯುವಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕಡಬ ಬ್ಲಾಕ್ ಯುವಕಾಂಗ್ರೆಸ್ ಉಸ್ತುವಾರಿಯಾಗಿ ಸುಧೀರ್ ದೇವಾಡಿಗ ಬಲ್ಯರವರು ನೇಮಕಗೊಂಡಿರುತ್ತಾರೆ.

ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರ ಸೂಚನೆ ಮೆರೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಸಿದ್ದೀಕ್ರವರು ಇವರನ್ನು ನೇಮಕ ಮಾಡಿರುತ್ತಾರೆ. ಸುಧೀರ್ ದೇವಾಡಿಗರವರು ಕುಟ್ರುಪ್ಪಾಡಿ ಗ್ರಾ.ಪಂ.ವ್ಯಾಪ್ತಿಯ ಪ್ರಧಾನ ಕಾರ್ಯದರ್ಶಿಯಾಗಿ, ಸುಳ್ಯ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದು ಈಗಾಗಲೇ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದು ಕಡಬ ಬ್ಲಾಕ್ ಯುವಕಾಂಗ್ರೆಸ್ ವ್ಯಾಪ್ತಿಯ ಸಂಪೂರ್ಣ ಉಸ್ತುವಾರಿಯನ್ನು ವಹಿಸಿದ್ದು ಗ್ರಾಮ ಮಟ್ಟದಲ್ಲಿ ಪದಾಧಿಕಾರಿಗಳ ನೇಮಕದೊಂದಿಗೆ ಪಕ್ಷವನ್ನು ಸಂಪೂರ್ಣ ಮುನ್ನಡೆಸುವ ಜವಾಬ್ದಾರಿಯನ್ನು ಇವರಿಗೆ ನೀಡಲಾಗಿದೆ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಿದ್ದೀಕ್ರವರು ತಿಳಿಸಿದ್ದಾರೆ. ಇವರು ಆಲಂಕಾರು ಮೆಸ್ಕಾಂ ಸಲಹಾ ಸಮಿತಿಯ ನಿರ್ದೇಶಕರಾಗಿದ್ದಾರೆ. ಹೊಸ್ಮಠ ಬಲ್ಯ ಜನನಿ ಫ್ರೆಂಡ್ಸ್‌ ಕ್ಲಬ್ನ ಪ್ರಧಾನ ಕಾರ್ಯದರ್ಶಿಯಾಗಿರುವ ಇವರು ವಿವಿಧ ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

error: Content is protected !!

Join the Group

Join WhatsApp Group