(ನ್ಯೂಸ್ ಕಡಬ) newskadaba.com ಮಂಗಳೂರು, ಅ.4. ಕೇರಳದ ಕಣ್ಣೂರಿನಲ್ಲಿ ನಡೆಯುವ ಬಿಜೆಪಿ ಜನರಕ್ಷಾ ಯಾತ್ರೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಮಂಗಳೂರಿಗೆ ಆಗಮಿಸಿದ್ದು, ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಗತಿಸಲಾಯಿತು.
ಸಿಎಂ ಆದ ನಂತರ ಇದೇ ಮೊದಲ ಬಾರಿಗೆ ಕರಾವಳಿಗೆ ಆಗಮಿಸಿದ ಇವರು ಕೇರಳದಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್. ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಬಿಜೆಪಿ ಆಯೋಜಿಸಿರುವ ಬೃಹತ್ ಜನರಕ್ಷಾ ಯಾತ್ರೆಯ ನೇತೃತ್ವವನ್ನು ವಹಿಸಲಿದ್ದಾರೆ.
ಜನರಕ್ಷಾ ಯಾತ್ರೆಗೆ ಈಗಾಗಲೆ ಚಾಲನೆ ದೊರೆತಿದ್ದು, ಈ ಯಾತ್ರೆ 15 ದಿನಗಳ ಕಾಲ ನಡೆಯಲಿದೆ. ಅ.17 ರಂದು ತಿರುವನಂತಪುರಂನಲ್ಲಿ ಕೊನೆಗೊಳ್ಳಲಿದೆ. ಪ್ರತಿದಿನವೂ ದೇಶದಾದ್ಯಂತದ ಯುವಮೋರ್ಚಾ ಕಾರ್ಯಕರ್ತರು, ಬಿಜೆಪಿ ಆಡಳಿತವುಳ್ಳ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಈ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ.