(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 19. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಬಳಿ ಇಂದು ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿರುವ ಪರಿಣಾಮದಿಂದಾಗಿ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಢಿಕ್ಕಿ ಹೊಡೆದ ಪರಿಣಾಮದಿಂದಾಗಿ ಬೈಕ್ ನಲ್ಲಿದ್ದ ಸವಾರ ಹಾಗೂ ಓಮ್ನಿ ಕಾರಿನ ಚಾಲಕ ಸುನೀಲ್(28) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದ ಹಿನ್ನಲೆಯಿಂದಾಗಿ ಓಮ್ನಿ ಕಾರಿನ ಹಿಂದೆ ಬರುತ್ತಿದ್ದ ಬೈಕ್ ಓಮ್ನಿಗೆ ಢಿಕ್ಕಿ ಹೊಡೆದಿದ್ದು, ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ. ಇನ್ನು ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.