ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಶೀಘ್ರವೇ ಜಾರಿ ➤ಪಶು ಸಂಗೋಪನೆ ಇಲಾಖೆ ಸಚಿವ ಪ್ರಭು ಚವ್ಹಾಣ್

(ನ್ಯೂಸ್ ಕಡಬ) newskadaba.com ಬೆಂಗಳೂರು . 21: ರಾಜ್ಯದಲ್ಲಿ ಶೀಘ್ರವೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಲಾಗುವುದು ಎಂದು ಪಶು ಸಂಗೋಪನೆ ಇಲಾಖೆಯ ಸಚಿವ ಪ್ರಭು ಚವ್ಹಾಣ್​​​ ತಿಳಿಸಿದರು.

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಹತ್ಯೆ ನಿಷೇಧ ಮಾಡುವುದು ನೂರಕ್ಕೆ ನೂರರಷ್ಟು ಖಚಿತ. ಇದರಲ್ಲಿ ಹೆಜ್ಜೆ ಹಿಂದಿಡುವ ಮಾತೇ ಇಲ್ಲ. ಅದರ ಸಾಧಕ ಬಾಧಕಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು. ಸಚಿವ ಸ್ಥಾನ ಸಿಗುತ್ತದೆ ಎಂದು ನಾನು ಕನಸು ಕಂಡಿರಲಿಲ್ಲ. ಸಚಿವ ಸ್ಥಾನ ಸಿಕ್ಕಿದೆ. ಈಗ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ಬೇಡ ಅಂದರೂ ಕಾರ್ಯಕರ್ತನಾಗಿಯೂ ಕೆಲಸ ಮಾಡುತ್ತೇನೆ ಎಂದು  ತಿಳಿಸಿದ್ಧಾರೆ.

Also Read  ಅಮೀರ್ ಬನ್ನೂರು ಅವರಿಗೆ ಕರುನಾಡು ಚೇತನ ಪ್ರಶಸ್ತಿ ಪ್ರದಾನ

 

 

error: Content is protected !!
Scroll to Top