ತುಳು ಅಕಾಡೆಮಿಯಿಂದ ಸಿ.ಟಿ ರವಿಯವರಿಗೆ ಗೌರವಾರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು . 21: ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿ ಕಾರ್ಯ ನಿರ್ವಹಿಸಿ ತಮ್ಮ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿದ ಸಿ.ಟಿ. ರವಿ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‍ಸಾರ್ ಅವರು ವಿಶೇಷವಾಗಿ ತುಳುನಾಡಿನ ಪರಂಪರೆಯ ಮುಟ್ಟಾಳೆ, ರೇಷ್ಮೆ ಶಾಲು, ಸಹಿತ ತುಳುನಾಡನ್ನು ಪ್ರತಿಬಿಂಬಿಸುವ ವಿಶೇಷ ಕಲಾಕೃತಿಯನ್ನು ನೀಡಿ ಸಾರ್ವತ್ರಿಕವಾಗಿ ಗೌರವಿಸಿದರು.

ಬೆಂಗಳೂರಿನ ಕಲಾ ಗ್ರಾಮದ ಸಭಾಂಗಣದಲ್ಲಿ ನಡೆದ ಈ ಸಮಾರಂಭದಲ್ಲಿ ಮಾತನಾಡಿದ ದಯಾನಂದ ಜಿ. ಕತ್ತಲ್‍ಸಾರ್, “ಸಚಿವ ಸ್ಥಾನಕ್ಕೆ ನ್ಯಾಯ ಒದಗಿಸಿ, ಕೊರೊನಾ ಸಂಕಷ್ಟದ ಸಮಯದಲ್ಲಿ ರಾಜ್ಯದ ಎಲ್ಲಾ ಅಕಾಡೆಮಿಗಳನ್ನು ವಿಶ್ವಾಸಕ್ಕೆ ಪಡೆದುಕೊಂಡು ಕಾರ್ಯ ನಿರ್ವಹಿಸಿದ್ದು ಶ್ಲಾಘನೀಯ. ರಾಜ್ಯದ ಸಂಸ್ಕೃತಿ ಸಂಸ್ಕಾರಗಳನ್ನು ಪ್ರತಿಬಿಂಬಿಸಲು ನಮ್ಮೆಲ್ಲರನ್ನು ಹುರಿದುಂಬಿಸಿ ಪ್ರೋತ್ಸಾಹಿಸಿ, ಅವರ ಸ್ಥಾನಕ್ಕೊಂದು ನ್ಯಾಯ ಒದಗಿಸಿದ ಅಪರೂಪದ ಸಚಿವರಾಗಿದ್ದಾರೆ. ರಾಜ್ಯದ ಸಾಂಸ್ಕೃತಿಕ ಲೋಕಕ್ಕೆ ತಮ್ಮದೇ ಆದ ವಿಶೇಷ ಕೊಡುಗೆ ನೀಡಿರುವುದು ವಿಶೇಷ” ಎಂದು ಹೇಳಿದರು.

Also Read  ಕಡಬ: ಪೊಲೀಸ್ ಕಾನ್ಸ್‌ಟೇಬಲ್ ಭವಿತ್ ರೈ ಹೆಡ್ ಕಾನ್ಸ್‌ಟೇಬಲ್ ಆಗಿ ಮುಂಭಡ್ತಿ

error: Content is protected !!
Scroll to Top