ದಕ್ಷಿಣಕನ್ನಡ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ➤ ಹೋಂ ಕ್ವಾರೆಂಟೈನಲ್ಲಿರುವಂತೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು . 24: ಕಾಲೇಜುಗಳು ಆರಂಭವಾಗಿ ವಾರವಾಗಿದ್ದು, ದ.ಕ.ದಲ್ಲಿ 29 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್‌ ಪತ್ತೆಯಾಗಿದೆ. ಇದರಲ್ಲಿ ಹೊರ ರಾಜ್ಯದ ವಿದ್ಯಾರ್ಥಿಗಳೂ ಸೇರಿದ್ದಾರೆ. ಮಂಗಳೂರಿನಲ್ಲಿ 16, ಸುಳ್ಯದಲ್ಲಿ 4, ಬೆಳ್ತಂಗಡಿಯಲ್ಲಿ 1, ಬಂಟ್ವಾಳದಲ್ಲಿ 7, ಪುತ್ತೂರಿನಲ್ಲಿ ಒಬ್ಬ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡಿದೆ.

ಮಂಗಳೂರಿನ ಕೆಎಂಸಿಯಲ್ಲಿ ಕಲಿಯುವ ಹೊರ ರಾಜ್ಯದಿಂದ ಮಂಗಳೂರಿಗೆ ಬಂದ 6 ವಿದ್ಯಾರ್ಥಿಗಳಲ್ಲೂ ಕೊರೊನಾ ಪಾಸಿಟಿವ್‌ ಪತ್ತೆಯಾಗಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ ತಿಳಿಸಿದ್ದಾರೆ.ಕಳೆದ ಕೆಲವು ದಿನಗಳಿಂದ ವಿದ್ಯಾರ್ಥಿಗಳ ಕೋವಿಡ್‌ ಪರೀಕ್ಷೆ ನಡೆಸಲಾಗುತ್ತಿದ್ದು, ಅದರ ವರದಿ ಸಿಗುವಾಗ ವಿಳಂಬವಾಗಿದೆ. ಶನಿವಾರ ರಾತ್ರಿವರೆಗೆ 16,441 ವಿದ್ಯಾರ್ಥಿಗಳ ಕೋವಿಡ್‌ ತಪಾಸಣೆ ಪರೀಕ್ಷೆ ನಡೆಸಿದ್ದು, 29 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಅವರನ್ನು ಹೋಂ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Also Read  ಕಡಬ: ರಸ್ತೆ ದುರಸ್ತಿಯಾಗದ ಹಿನ್ನೆಲೆಯಲ್ಲಿ 140 ಜನರಿಂದ ಮತದಾನ ಬಹಿಷ್ಕರಿಸಿ ಶ್ರಮದಾನ

 

error: Content is protected !!
Scroll to Top