ಕಾಪು: ಕಾರು ಢಿಕ್ಕಿ ಪಾದಚಾರಿ ಸ್ಥಳದಲ್ಲೇ ಮೃತ್ಯು



(ನ್ಯೂಸ್ ಕಡಬ) newskadaba.com ಕಾಪು . 24: ಉಚ್ಚಿಲ ಪೇಟೆಯಲ್ಲಿ ಪಾದಚಾರಿಯೋರ್ವರಿಗೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸುಧಾಕರ ಶೆಟ್ಟಿ ಎಂದು ಗುರುತಿಸಲಾಗಿದೆ.







 

ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಂದಾಪುರದಿಂದ ಮಂಗಳೂರಿಗೆ ಚಲಿಸುತ್ತಿದ್ದ ಕಾರು, ನರ್ಸರಿಯಲ್ಲಿ ಸಸಿ ಖರೀದಿಸಿ ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ಉಚ್ಚಿಲ ಪೇಟೆಯತ್ತ ಹೋಗುತ್ತಿದ್ದ ಪಾದಚಾರಿಯೋರ್ವರಿಗೆ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭಿರವಾಗಿ ಗಾಯಗೊಂಡು ಮೃತಪಟ್ಟ ವ್ಯಕ್ತಿಯನ್ನು ಸ್ಥಳೀಯರ ಸಹಕಾರದಿಂದ ಆಂಬ್ಯುಲೆನ್ಸ್ ಮೂಲಕ ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.






 

Xl

error: Content is protected !!
Scroll to Top