ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 10 ಶಾಲೆಗಳ ದತ್ತು ಸ್ವೀಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು . 25: ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಸುರೇಂದ್ರ ಕುಮಾರ್ ಅವರು ಉದ್ಘಾಟಿಸಿದರು.

 

 

ಕಾರ್ಯಕ್ರಮದಲ್ಲಿ ಎಸ್ ಡಿ ಎಂ ವಿಶ್ವವಿದ್ಯಾನಿಲಯ ಧಾರವಾಡ ವತಿಯಿಂದ 10 ಶಾಲೆಗಳನ್ನು ದತ್ತು ಸ್ವೀಕರಿಸಿ, ಅಭಿವೃದ್ಧಿ ಪಡಿಸುವ ಕುರಿತು ಚರ್ಚಿಸಲಾಯಿತು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರವರು ರಾಜ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಯುತ್ತಿರುವ ಅಭಿವೃದ್ಧಿ ಕೆಲಸ ಕಾರ್ಯಗಳ ಬಗ್ಗೆ ಶ್ಲಾಘನೀಯ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಿಕ್ಷಣ ಸಚಿವ ಸುರೇಶ್ ಕುಮಾರ್, ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Also Read  ಬಿಳಿನೆಲೆ: ವಿಷಸೇವಿಸಿ ವ್ಯಕ್ತಿ ಆತ್ಮಹತ್ಯೆ

 

Xl

error: Content is protected !!
Scroll to Top