ಗೋಹತ್ಯೆ ನಿಷೇಧ ಕಾಯ್ದೆ ಮುಂಬರುವ ಚಳಿಗಾಲ ಅಧಿವೇಶನದಲ್ಲಿ ಮಂಡನೆ ➤ ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್

(ನ್ಯೂಸ್ ಕಡಬ) newskadaba.com ಬೆಂಗಳೂರು . 25: ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ಸಂಬಂಧ ಬರುವ ಡಿ.7ರಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ವಿಧೇಯಕವನ್ನು ಮಂಡನೆ ಮಾಡಲು ಅಗತ್ಯ ಸಿದ್ಥತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಅವರು ಹೇಳಿದ್ದಾರೆ.

 

ರಾಜ್ಯಸ್ಥಾನ, ಆಂಧ್ರಪ್ರದೇಶ, ತೆಲಂಗಾಣ, ಅಸ್ಸಾಂ, ಬಿಹಾರ ಸೇರಿದಂತೆ ಹಲವು ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದೆ. ಬೇರೆ ಬೇರೆ ರಾಜ್ಯದಲ್ಲಿ ಅನುಷ್ಠಾನಗೊಂಡಿರುವ ಕಾಯ್ದೆಯ ಅಧ್ಯಯನ ನಡೆಸಲಾಗಿದ್ದು, ಈ ಬಗ್ಗೆ ಇಲಾಖಾ ಅಧಿಕಾರಿಗಳ ಮಟ್ಟದಲ್ಲಿ ಮತ್ತು ಪರಿಣಿತರೊಂದಿಗೆ ಚರ್ಚೆ ಮಾಡಲಾಗಿದೆ. ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ, ರಾಜ್ಯದ ಗೋಹತ್ಯೆ ನಿಷೇಧ ಕಾಯ್ದೆ ಹೆಚ್ಚು ಬಲವಾಗಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಇನ್ನು ಮುಂದೆ ಗೋಹತ್ಯೆ ನಿಷೇಧವಾಗಲಿದೆ. ರಾಜ್ಯದ ಒಳಗೂ ಮತ್ತು ಹೊರಗೂ ಗೋಮಾಂಸ ಆಮದು ಮತ್ತು ರಫ್ತು ಹಾಗೂ ಅಕ್ರಮ ಜಾನುವಾರ ಸಾಗಾಟ ಸಂಪೂರ್ಣ ನಿಷೇಧವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

 

 

error: Content is protected !!

Join the Group

Join WhatsApp Group