ಮಂಗಳೂರು: ಬೈಕ್-ಮೀನಿನ ಲಾರಿ ನಡುವೆ ಅಪಘಾತ ➤ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು



(ನ್ಯೂಸ್ ಕಡಬ) newskadaba.com ಮಂಗಳೂರು . 25: ಸುರತ್ಕಲ್ ಸಮೀಪದ ಎನ್ ಐಟಿಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ದಿನ ಮೀನಿನ ಲಾರಿಯೊಂದು ಬೈಕ್ ಸವಾರನಿಗೆ ಢಿಕ್ಕಿಯಾದ ಪರಿಣಾಮದಿಂದಾಗಿ ಬೈಕ್ ಸವಾರ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸೂರಿಂಜೆ ನಿವಾಸಿ ಕುಮಾರ್(45) ಎಂದು ಗುರುತಿಸಲಾಗಿದೆ.







 

Xl

 

ಮಂಗಳೂರು ಕಡೆಯಿಂದ ಉಡುಪಿ ಕಡೆ ತೆರಳುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನ ಎನ್ ಐ ಟಿಕೆ ಸಮೀಪ ಈ ದುರಂತ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 

Xl

error: Content is protected !!
Scroll to Top