ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತಾಧಿಕಾರಿಯಾಗಿ ಡಾ.ಯತೀಶ್ ಉಳ್ಳಾಲ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ನ. 28: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿಯಾಗಿದ್ದ ಅಪರ ಜಿಲ್ಲಾಧಿಕಾರಿ ರೂಪಾ ಅವರನ್ನು ಬದಲಾಯಿಸಲಾಗಿದ್ದು, ಪುತ್ತೂರು ಉಪವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಅವರನ್ನು ನೇಮಕ ಮಾಡಲಾಗಿದೆ.

 

 

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸರ್ಕಾರದ ಆದೇಶದ ಪ್ರಕಾರ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ರ ವಿಧಿ 29 ರ ಅನ್ವಯ ದೇವಾಲಯದ ದೈನಂದಿನ ಆಡಳಿತ ನಿರ್ವಹಣೆ ಹಾಗೂ ಆರ್ಥಿಕ ವ್ಯವಹಾರ ನಿರ್ವಹಿಸುವ ದೃಷ್ಟಿಯಿಂದ ಅಪರ ಜಿಲ್ಲಾಧಿಕಾರಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ವ್ಯವಸ್ಥಾಪನಾ ಸಮಿತಿ ರಚನೆ ಆಗುವವರೆಗೂ ಅಥವಾ 6 ತಿಂಗಳ ಅವಧಿ ವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಆದೇಶಿಸಿತ್ತು.

Also Read  ಆಕಸ್ಮಿಕವಾಗಿ ವಿದ್ಯುತ್ ತಂತಿ ತುಳಿದು ಯುವಕ ಮೃತ್ಯು

Xl

 

ಅಪರ ಜಿಲ್ಲಾಧಿಕಾರಿಯವರಿಗೆ ಕಚೇರಿಯಲ್ಲಿ ಕೆಲಸದ ಒತ್ತಡ ಇರುವುದರಿಂದ ಹಾಗೂ ದೇವಸ್ಥಾನದಲ್ಲಿ ಡಿಸೆಂಬರ್ ನಲ್ಲಿ ಚಂಪಾ ಷಷ್ಠಿ ಉತ್ಸವ ಇರುವುದರಿಂದ, ಉತ್ಸವದ ಉಸ್ತುವಾರಿ ಬಗ್ಗೆ ಪೂರ್ಣ ಪ್ರಮಾಣದಲ್ಲಿ ಭಾಗಿಯಾಗಲು ಸಾಧ್ಯವಾಗದಿರುವುದರಿಂದ ಅಪರ ಜಿಲ್ಲಾಧಿಕಾರಿ ಬದಲಿಗೆ ಆಡಳಿತಾಧಿಕಾರಿ ಹುದ್ದೆಗೆ ಸಹಾಯಕ ಆಯುಕ್ತರು, ಪುತ್ತೂರು ಉಪ ವಿಭಾಗ, ಅವರನ್ನು ನೇಮಕ ಮಾಡಲಾಗಿದೆ.ಡಾ.ಯತೀಶ್ ಉಳ್ಳಾಲ್ ಕಳೆದ ಬಾರಿಯ ಚಂಪಾ ಷಷ್ಠಿ ಸಂದರ್ಭದಲ್ಲೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜವಾಬ್ದಾರಿ ವಹಿಸಿಕೊಂಡಿದ್ದರು.

error: Content is protected !!
Scroll to Top