ಕೋಟ :ಸ್ಕೂಟಿಗೆ ಡಿಕ್ಕಿ ಹೊಡೆದ ಫಾರ್ಚೂನ್ ➤ ಯುವತಿ ಮೃತ್ಯು, ಮತ್ತೋರ್ವ ಯುವತಿ ಗಂಭೀರ



(ನ್ಯೂಸ್ ಕಡಬ) newskadaba.com ಕೋಟ . 29: ಕಳೆದ ದಿನ  ಉಡುಪಿಯ ಕೋಟದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಯುವತಿಯೋರ್ವಳು ಸಾವನ್ನಪ್ಪಿದ್ದಾಳೆ. ಮತ್ತೋರ್ವ ಯುವತಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ.







 

 

ಕೋಟ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ರ ಕೃಷ್ಣಭವನ ಹೋಟೆಲ್ ಎದುರುಗಡೆ ಈ ಅಪಘಾತ ಸಂಭವಿಸಿದ್ದು, ಶ್ರೇಯಾ ಶಾನುಭಾಗ್ (24) ಮೃತಪಟ್ಟು ಪ್ರಜ್ಞಾ (25) ಗಂಭೀರ ಗಾಯಗೊಂಡಿದ್ದಾರೆ. ಬೇಳೂರು ನಿವಾಸಿ ಶ್ರೇಯಾ ಕುಂದಾಪುರದಿಂದ ಬ್ರಹ್ಮಾವರ ಕಡೆ ಸ್ಕೂಟಿಯಲ್ಲಿ ಬರುತ್ತಿದ್ದ ಸಂದರ್ಭ ಫಾರ್ಚೂನ್ ವಾಹನ ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಇಬ್ಬರೂ ರಸ್ತೆಗೆ ಬಿದ್ದು ಗಂಭೀರ ಸ್ವರೂಪದ ಗಾಯಗಳಾಗಿತ್ತು ಎಂದು ಹೇಳಲಾಗಿದೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 

error: Content is protected !!
Scroll to Top