(ನ್ಯೂಸ್ ಕಡಬ) newskadaba.com ಬೆಂಗಳೂರು ನ. 30: ರಾಜ್ಯದಲ್ಲಿ ಶಾಲೆ ಆರಂಭದ ಕುರಿತಂತೆ ಚರ್ಚೆ ನಡೆದಿರುವ ಬೆನ್ನಲ್ಲೇ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಪ್ರೌಢ ಶಿಕ್ಷಣಾ ಪರಿಕ್ಷಾ ಮಂಡಳಿಗೆ ತಾತ್ಕಾಲಿಕ ವೇಳಾಪಟ್ಟಿ ರೂಪಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ ಎನ್ನಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ ಕರೆದು ಎಸ್ ಎಸ್ ಎಲ್ ಸಿ ಪರೀಕ್ಷೆಗಳ ವೇಳಾಪಟ್ಟಿ ಕುರಿತು ಚರ್ಚಿಸಲಿದ್ದಾರೆಂದು ತಿಳಿದುಬಂದಿದ್ದು, ಡಿಸೆಂಬರ್ ಮೂರನೇ ವಾರದಲ್ಲಿ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಶಿಕ್ಷಣ ಇಲಾಖೆಯು ಈಗಾಗಲೇ ಶೇ. 30 ರಷ್ಟು ಪಠ್ಯವನ್ನು ಕಡಿತ ಮಾಡಿದೆ. ಆದರೆ ಶಾಲೆ ಆರಂಭವಾಗದೇ ಇರುವುದರಿಂದ ಮತ್ತಷ್ಟು ಪಠ್ಯ ಕಡಿತ ಮಾಡುವ ಸಾಧ್ಯತೆ ಇದೆ. ಜೊತೆಗೆ ಡಿಸಂಬರ್ 3ನೇ ವಾರದಲ್ಲಿ SSLC ಪರೀಕ್ಷೆ ತಾತ್ಕಾಲಿಕ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.