ಕೌಡಿಚಾರು: ಬೈಕ್ ಅಪಘಾತ ➤ ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕೌಡಿಚಾರು, ಡಿ. 01: ಇತ್ತೀಚೆಗೆ ಪುತ್ತೂರು ತಾಲ್ಲೂಕಿನ ಕೌಡಿಚ್ಚಾರ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪ್ರವೀಣ್(39) ಎಂದು ಗುರುತಿಸಲಾಗಿದೆ.

 

ಬೈಕ್ ನಲ್ಲಿ ಸುಳ್ಯ ಕಡೆಗೆ ಬರುತ್ತಿದ್ದಗಾ ಪುತ್ತೂರು ತಾಲೂಕಿನ ಕೌಡಿಚ್ಚಾರ್ ಬಳಿ ದನ ಅಡ್ಡಬಂದ ಪರಿಣಾಮ ಬೈಕ್ ಸ್ಕಿಡ್ ಆಗಿ ನೆಲಕ್ಕೆ ಉರುಳಿ ಬಿದ್ದ ಪರಿಣಾಮದಿಂದಾಗಿ ಪ್ರವೀಣ್ ರವರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದರು . ಆದರೇ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Scroll to Top