” ಶ್ರೀ ಕೃಷ್ಣ ಮಠ ನಾಮಫಲಕದಲ್ಲಿ ಕನ್ನಡ ಹೊರಗಿಟ್ಟದ್ದು ಅಪರಾಧ” ➤ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ

(ನ್ಯೂಸ್ ಕಡಬ) newskadaba.com ಉಡುಪಿ ಡಿ. 01: ಶ್ರೀ ಕೃಷ್ಣ ಮಠದ ನಾಮಫಲಕದಲ್ಲಿ ಕನ್ನಡವನ್ನು ತೆಗೆದು ಹಾಕಿದ್ದು ಸೂಕ್ತ ಕ್ರಮವಲ್ಲ. ಕನ್ನಡ ಸಾಹಿತ್ಯ ಪರಿಷತ್ ಇದನ್ನು ಉಗ್ರವಾಗಿ ಖಂಡಿಸುತ್ತದೆ ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ತಿಳಿಸಿದ್ದಾರೆ. ಕನ್ನಡ ನಾಡಿನಲ್ಲಿ ಮೊದಲು ಕನ್ನಡಕ್ಕೆ ಆದ್ಯತೆ. ನಾಮಫಲಕ ದಲ್ಲಿ ಮೊದಲು ಕನ್ನಡ ಇರಬೇಕು. ಅನಂತರ ಇತರ ಭಾಷೆ, ಒಂದು ಧಾರ್ಮಿಕ ಸಂಸ್ಥೆಯು ಭಾಷೆಗಳ ನಡುವೆ ಕಂದಕ ಸೃಷ್ಟಿಸುವುದು ಸರಿಯಲ್ಲ.

Xl

ನಾಮ ಫಲಕದ ಈ ಪ್ರಕರಣ ಸರ್ಕಾರದ ಕಾನೂನಿನ ಸ್ಪಷ್ಟ ಉಲ್ಲಂಘನೆ. ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಮುಂದೆ ಇದನ್ನು ಸರಿಪಡಿಸುವವರೆಗೂ ಹೋರಾಟ ಅನಿವಾರ್ಯ. ಸಂಬಂಧಪಟ್ಟವರು ತಕ್ಷಣ ಇದನ್ನು ಸರಿಪಡಿಸಬೇಕು. ಬೇರೆ ಭಾಷೆಯನ್ನು ಬಳಸುವಾಗ ಮೊದಲು ಕನ್ನಡವನ್ನೇ ಬಳಸಬೇಕು. ಮೊದಲು ಕನ್ನಡ, ಬಳಿಕ ಇತರ ಭಾಷೆ ನಾಮಫಲಕದಲ್ಲಿರಲಿ. ಕನ್ನಡ ಮತ್ತು ಸೋದರ ಭಾಷೆ ತುಳುವಿನ ನಡುವೆ ಕಂದಕ ನಿರ್ಮಾಣ ಮಾಡುವುದನ್ನೂ ಸಹ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದರು.

Also Read  ತೊಕ್ಕೊಟ್ಟು: ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ರಸ್ತೆ ದುರಸ್ಥಿಗೆ ಎಸ್ಡಿಪಿಐ ಆಗ್ರಹ

error: Content is protected !!
Scroll to Top