ಮಂಗಳೂರು: ಗೋಹತ್ಯೆ ನಿಷೇಧ ಕಾನೂನು ➤ ರಾಜ್ಯ ಸರ್ಕಾರಕ್ಕೆ ಸವಾಲೆಸೆದ ಯು.ಟಿ.ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರುಡಿ. 03:  ರಾಜ್ಯದಲ್ಲೀಗ ನಿಮ್ಮದೇ ಸರ್ಕಾರವಿದೆ. ಹಾಗಿರುವಾಗ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರುವ ಬಗ್ಗೆ ಎರಡು ತಿಂಗಳಿನಿಂದ ಬರೀ ಚರ್ಚೆ ಯಾಕೆ..? ಈ ಬಗ್ಗೆ ಸಂಪುಟ ಪ್ರಸ್ತಾಪ ಮಾಡಿ. ಚರ್ಚಿಸುವ ಎಂದು ಶಾಸಕ ಯುಟಿ ಖಾದರ್ ಸವಾಲೆಸೆದಿದ್ದಾರೆ.

 

 

ಮಂಗಳೂರಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲೀಗ ಗೋ ಹತ್ಯಾ ನಿಷೇಧ ಕಾನೂನಿನ ಬಗ್ಗೆ ಭಾರಿ ಚರ್ಚೆ ನಡೆಯುತ್ತಲಿದೆ. ಬಿಜೆಪಿ ಸರ್ಕಾರವು ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲಾಗುವುದು ಎಂದು ಹೇಳುತ್ತಲ್ಲೇ ಇದ್ದು ಈವರೆಗೂ ಜಾರಿಗೆ ಬಂದಿಲ್ಲ. ಗೋ ಹತ್ಯಾ ನಿಷೇಧ ಕಾನೂನು ಜಾರಿಗೆ ತರಲಾಗುವುದು ಎಂದು ನಿರಂತರವಾಗಿ ಹೇಳುತ್ತಲ್ಲೇ ಇರುವ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಖಾದರ್‌, ”ಎಪಿಎಂಸಿ ಕಾನೂನು ರಾತ್ರಿ ಬೆಳಗಾಗುವುದರೊಳಗೆ ತಂದಿದ್ದೀರಿ. ನಿಮಗೆ ಎಲ್ಲಾ ಕಾನೂನನ್ನು ರಾತ್ರಿ ಬೆಳಗಾಗುವುದರೊಳಗೆ ಜಾರಿಗೆ ತರಲಾಗುತ್ತದೆ. ಆದರೆ ಗೋ ಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರಲು ತಡವೇಕೆ” ಎಂದು ಪ್ರಶ್ನಿಸಿದ್ದಾರೆ.

 

Also Read  ನಕಲಿ ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಹೊಂದಿರುವವರ ವಿರುದ್ದ ಕಾನೂನು ಕ್ರಮ ➤ ಸುಳ್ಯ ತಹಶೀಲ್ದಾರ್ ಅನಿತಾ ಲಕ್ಷ್ಮೀ

error: Content is protected !!
Scroll to Top