ಮಂಗಳೂರು: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಕಳೆದ ದಿನ ರಾ. ಹೆದ್ದಾರಿ 66 ರ ಕುಂಪಲ ಬೈಪಾಸ್‍ನಲ್ಲಿ ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರೊಂದು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

 

 

ಗಾಯಗೊಂಡ ಬಾಲಕನನ್ನು ಐಯಾನ್(16) ಎಂದು ಗುರುತಿಸಲಾಗಿದೆ. ಐಯಾನ್ ಅಂಗಡಿಗೆ ತೆರಳಿ ವಾಪಾಸ್ಸಾಗುತ್ತಿದ್ದ ಸಂದರ್ಭ ಕಾರೊಂದು ಈತನ ಮನೆಯ ಎದುರುಗಡೆಯೇ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಾಲಕನಿಗೆ ಢಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.

 

Scroll to Top