ಮಂಗಳೂರು: ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಕಳೆದ ದಿನ ಬೈಕ್‍ಗೆ ಬಸ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ನಗರದ ಕೂಳೂರು ಸೇತುವೆ ಮೇಲೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪಂಜಿಮೊಗರು ನಿವಾಸಿ ಅಹಮ್ಮದ್ ಕಬೀರ್ (22) ಎಂದು ಗುರುತಿಸಲಾಗಿದೆ.

 

 

ಕೂಳೂರು ಕಡೆಯಿಂದ ಕೆಐಒಸಿಎಲ್ ಕಡೆಗೆ ಬೈಕ್ ನಲ್ಲಿ ಹೋಗುತ್ತಿರುವಾಗ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ದ್ವಿಚಕ್ರ ಸವಾರ ಗಂಭೀರ ಗಾಯಗೊಂಡಿದ್ದು, ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದ ವೈದ್ಯರು ಕಬೀರ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಇನ್ನು ಘಟನೆಯ ಕುರಿತು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಬೆಳ್ತಂಗಡಿ: ಅಕ್ರಮ ಗೋ ಸಾಗಾಟ ಐವರ ಬಂಧನ

 

 

error: Content is protected !!