ಚಾರ್ಮಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಕಾರು ➤ ಕಂದಕದಲ್ಲಿ ಸಿಲುಕಿಕೊಂಡ ಐವರು.!

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 05: ಚಾಲಕನ ನಿಯಂತ್ರಣ ತಪ್ಪಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಾಡಿ ಘಾಟ್‍ನ ಬಿದರತಳದಲ್ಲಿ ನಡೆದಿದೆ.

 

 

ಕಾರಿನಲ್ಲಿದ್ದ ಐವರು ಕಂದಕದಲ್ಲಿ ಸಿಲುಕಿದ್ದು, ಮೂವರು ಗಾಯಗೊಂಡಿದ್ದಾರೆ. ಇವರನ್ನು ಸ್ಥಳೀಯರ ಸಹಾಯದಿಂದ ರಕ್ಷಣೆ ಮಾಡಲಾಗಿದ್ದು, ಅಪಘಾತದಲ್ಲಿ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Also Read  ಶಿಕ್ಷಕಿ ಆತ್ಮಹತ್ಯೆ- ಪತಿಗೆ 9 ವರ್ಷ ಹಾಗೂ ಅತ್ತೆಗೆ 7 ವರ್ಷ ಜೈಲು ಶಿಕ್ಷೆ ಪ್ರಕಟ

 

error: Content is protected !!
Scroll to Top