ಬೆಳ್ತಂಗಡಿ :ಏಣಿಯಿಂದ ಕಾಲುಜಾರಿ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.08:  ಮನೆಯ ಮಹಡಿ ಹತ್ತುವ ವೇಳೆ ಏಣಿಯಿಂದ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಗಾಯಗೊಂಡಿದ್ದ ಸುಲೇಮಾನ್ (34) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ.

ಘಟನೆ ಭಾನುವಾರ ನಡೆದಿದ್ದು, ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸೋಮವಾರ ಮೃತಪಟ್ಟಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರಿಯರರನ್ನು ಅಗಲಿದ್ದಾರೆ.

 

Scroll to Top