(ನ್ಯೂಸ್ ಕಡಬ) newskadaba.com ಸುಳ್ಯ, ಡಿ.08: ಈಗಾಗಲೇ ಗ್ರಾಮ ಪಂಚಾಯತ್ ಚುನಾವಣೆ ಹತ್ತಿರವಾಗುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಯಕ್ಕೆ ಹೊಸ ತಹಶೀಲ್ದಾರ್ ರನ್ನು ನೇಮಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
ಸುಳ್ಯ ತಹಶೀಲ್ದಾರ್ ಅನಂತಶಂಕರ್ ರವರು ಕಡಬ ತಹಶೀಲ್ದಾರ್ ಆಗಿಯೂ ಕಾರ್ಯ ನಿರ್ವಹಿಸುತ್ತಿರುವುದರಿಂದ ಚುನಾವಣೆಯನ್ನು ಶಾಂತಿಯುತವಾಗಿ ಮತ್ತು ನ್ಯಾಯ ಸಮ್ಮತವಾಗಿ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಶಾಖೆಯ ತಹಶೀಲ್ದಾರ್ ಆಗಿರುವ ಕು. ಅನಿತಾಲಕ್ಷ್ಮಿ ಅವರನ್ನು ಸುಳ್ಯ ತಹಶೀಲ್ದಾರ್ ಆಗಿ ನೇಮಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.