ಈ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾನೂನು ಮಂಡನೆ ➤ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕಟೀಲ್

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.08:ರಾಜ್ಯದಲ್ಲಿ ಗೋಹತ್ಯೆ ಹಾಗೂ ಲವ್ ಜಿಹಾದ್ ನಿಷೇಧ ಕಾನೂನು ಜಾರಿಗೆ ತರುವ ನಿಟ್ಟಿನಲ್ಲಿ ಸರಕಾರ ಬದ್ಧವಾಗಿದೆ. ಈಗಿನ ವಿಧಾನಸಭಾ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಮಂಡನೆಯಾಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋ ಹತ್ಯೆ, ಲವ್ ಜೆಹಾದ್ ನಿಷೇಧ ಬಗ್ಗೆ ಬಿಜೆಪಿ ಕಾರ್ಯಾಕಾರಿಣಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಅದನ್ನು ಜಾರಿಗೊಳಿಸಲು ನಾವು ಬದ್ಧ ಎಂದರು.

 

 

Scroll to Top