ಕೆಫೆ ಕಾಫಿ ಡೇ ನೂತನ ಸಿಇಒ ಆಗಿ ಮಾಳವಿಕ ಹೆಗ್ಡೆ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.08:ಕಾಫೀ ಡೇ ಎಂಟರ್ ಪ್ರೈಸಸ್ ಸಂಸ್ಥೆಯ ನೂತನ ಮುಖ್ಯ ಕಾರ್ಯ ನಿರ್ವಾಹಕ ಆಧಿಕಾರಿಯಾಗಿ( ಸಿಇಒ) ವಿ.ಜಿ. ಸಿದ್ಧಾರ್ಥ ಪತ್ನಿ ಮಾಳವಿಕಾ ಹೆಗ್ಡೆ ಅವರು ನೇಮಕಗೊಂಡಿದ್ದಾರೆ.

ಕಳೆದ ವರ್ಷ ಕಾಫಿ ಡೇ ಸಂಸ್ಥಾಪಕ ಸಿದ್ದಾರ್ಥ್ ಹೆಗ್ಡೆ ಮಂಗಳೂರಿನಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಿದ್ದಾರ್ಥ್ ನಿಧನದಿಂದ ತಾತ್ಕಾಲಿಕ ಅಧ್ಯಕ್ಷರಾಗಿ ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ನೂತನ ಸಿಇಒ ಆಗಿ ಮಾಳವಿಕರನ್ನು ನೇಮಕಾತಿ ಮಾಡಲಾಗಿದೆ ಎಂದು ಸಂಸ್ಥೆ ಖಚಿತಪಡಿಸಿದೆ.ಕಾಫಿ ಡೇ ಭಾರತದಲ್ಲಿ ಮಾತ್ರವಲ್ಲದೆ ದೇಶ ವಿದೇಶಗಳಲ್ಲೂ ಪ್ರಚಲಿತದಲ್ಲಿದೆ.

Also Read  ಸಮಯ ಪ್ರಜ್ಞೆ ಮೆರೆದ ಬಸ್ ಚಾಲಕ ಮತ್ತು ನಿರ್ವಾಹಕ➤16ಮಂದಿ ಪ್ರಯಾಣಿಕರು ಅಪಾಯದಿಂದ ಪಾರು

error: Content is protected !!
Scroll to Top