ಮಂಗಳೂರಿಗೆ ಜಾನುವಾರು ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಸ್ಥಳದಲ್ಲೇ ಸಾವನ್ನಪ್ಪಿದ 10 ದನಗಳು



(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12: ಜಾನುವಾರು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 10 ದನಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ದಾನಸಾಲೆ ಹೊರಬೈಲು ಬಳಿ ನಡೆದಿದೆ.





ದಾವಣಗೆರೆಯಿಂದ ಮಂಗಳೂರಿಗೆ ದನಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ್ದು, 10 ದನಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚಿನ ದನಗಳು ಗಾಯಗೊಂಡಿದೆ.ಘಟನೆ ನಡೆದ ಕೂಡಲೇ ಲಾರಿಯ ಚಾಲಕ ಹಾಗೂ ಕ್ಲೀನರ್ ಪರಾರಿಯಾಗಿದ್ದಾರೆ. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇನ್ನು ಈ ದನಗಳನ್ನು ಕಸಾಯಿಖಾನೆಗೆ ಸಾಗಿಸಲಾಗಿತ್ತೋ ಅಥವಾ ಗೋ ಶಾಲೆಗೆ ಸಾಗಿಸಲಾಗುತ್ತಿತ್ತೋ ಎಂಬುವುದು ಪೊಲೀಸರ ತನಿಖೆಯಿಂದಷ್ಟೆ ತಿಳಿದು ಬರಬೇಕಿದೆ.






error: Content is protected !!
Scroll to Top